ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ -ಹೊರಟ್ಟಿ

By Staff
|
Google Oneindia Kannada News

10ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ -ಹೊರಟ್ಟಿ
ಅರಮನೆ ಮೈದಾನದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಬೃಹತ್‌ ಸಮಾವೇಶ

ಬೆಂಗಳೂರು : 10 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯ ಹುದ್ದೆಗೆ ಬಡ್ತಿ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಬೃಹತ್‌ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.

ಪ್ರಾಥಮಿಕ ಶಾಲೆಗಳಲ್ಲಿ 10ಸಾವಿರಕ್ಕೂ ಅಧಿಕ ಮುಖ್ಯೋಪಾಧ್ಯಾಯರ ಹುದ್ದೆಗಗಳು ಖಾಲಿ ಇವೆ. ಶೀಘ್ರದಲ್ಲೇ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಈಗಾಗಲೇ ಸೇವೆಯಲ್ಲಿರುವ ಶಿಕ್ಷಕರ ಜ್ಯೇಷ್ಠತೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಶಿಕ್ಷಕರ ಎಲ್ಲ ಬೇಡಿಕೆಗಳ ಸ್ಪಷ್ಟ ಅರಿವು ನನಗಿದೆ. ಇನ್ನು ಆರು ತಿಂಗಳುಗಳಲ್ಲಿ ಹಂತಹಂತವಾಗಿ ಅವುಗಳನ್ನು ಬಗೆಹರಿಸಲಾಗುವುದು. ಶಿಕ್ಷಕರ ಅಭ್ಯುದಯಕ್ಕೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡಲಿದೆ. ಹಾಗಾಗಿ ಶಿಕ್ಷಕರು ನಿಶ್ಚಿಂತೆಯಿಂದ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಾಲಾ ಅಭಿವೃದ್ಧಿ ಸಮಿತಿಯಿಂದ(ಎಸ್‌ಡಿಎಂಸಿ) ಶಿಕ್ಷಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು, ಸಮಿತಿಯಲ್ಲಿ ಕೆಲ ಮಾರ್ಪಾಟು ಮಾಡಲಾಗುವುದು. ಅಲ್ಲದೆ ಲೈಂಗಿಕ ಕಿರುಕುಳ ನೀಡುವ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X