ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದ್ಯದಲ್ಲಿಯೇ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರ ತುಟ್ಟಿ?

By Staff
|
Google Oneindia Kannada News

ಸದ್ಯದಲ್ಲಿಯೇ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರ ತುಟ್ಟಿ?
ವಾಯುವ್ಯ-ಈಶಾನ್ಯ ವಿಭಾಗದಲ್ಲಿ ನಷ್ಟ, ವೋಲ್ವೋ ಬಸ್‌ಗೆ ವ್ಯಾಪಕ ಪ್ರತಿಕ್ರಿಯೆ

ಬೆಂಗಳೂರು : ರಾಜ್ಯರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಬಸ್‌ಪ್ರಯಾಣ ದರ ಹೆಚ್ಚಿಸುವ ಬಗೆಗೆ ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ವಿಭಾಗಗಳು ನಷ್ಟ ಎದುರಿಸುತ್ತಿವೆ. ಈ ನಷ್ಟ ತುಂಬಲು ದರ ಏರಿಕೆ ಅನಿವಾರ್ಯ. ಅಧಿಕಾರಿಗಳ ಸಮಾಲೋಚನೆ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಗ್ರಾಮೀಣ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಮಿನಿ ಬಸ್‌ ಸೇವೆಗೆ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ, ಈ ಸೇವೆ ವಾಪಸ್‌ ಪಡೆಯಲು ನಿರ್ಧರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಮಿನಿ ಬಸ್‌ಗಳನ್ನು ನಗರ ಸಾರಿಗೆಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಆರಂಭವಾದ ವೋಲ್ವೋ ಬಸ್‌ ಸೇವೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯಕ್ಕೆ ಏಳು ಬಸ್‌ಗಳು ಮಾತ್ರ ಸಂಚರಿಸುತ್ತಿದ್ದು, ಮಾಸಾಂತ್ಯದಲ್ಲಿ ಈ ಸಂಖ್ಯೆ 25ಕ್ಕೆ ಏರಲಿದೆ ಎಂದು ಅವರು ವಿವರಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X