ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 2ನೇ ವಾರದಲ್ಲಿ ಸಂಪುಟ ವಿಸ್ತರಣೆ : ಕುಮಾರಸ್ವಾಮಿ

By Staff
|
Google Oneindia Kannada News

ಮೇ 2ನೇ ವಾರದಲ್ಲಿ ಸಂಪುಟ ವಿಸ್ತರಣೆ : ಕುಮಾರಸ್ವಾಮಿ
ಶಾಸಕರ ಸಲಹೆಗೆ ಮನ್ನಣೆ, ಸದಾನಂದಗೌಡ ಆರೋಪ ಸುಳ್ಳು

ಬೆಂಗಳೂರು : ಮೇ 2ನೇ ವಾರದೊಳಗೆ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಇದುವರೆಗೆ ಕೆಲವು ಅಡ್ಡಿ ಆತಂಕಗಳು ಎದುರಾದ ಕಾರಣ ಸಂಪುಟ ವಿಸ್ತರಣೆ ಸಾಧ್ಯವಾಗಿಲ್ಲ. ಆದರೆ ಮೇ 2ನೇ ವಾರದಲ್ಲಿ ಖಚಿತವಾಗಿ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.

ನಿಗಮ-ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿಯಲ್ಲಿ ಮುಖ್ಯಮಂತ್ರಿ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ, ಎಂದು ಬಿಜೆಪಿ ಅಧ್ಯಕ್ಷ ಸದಾನಂದಗೌಡ ಮಾಡಿರುವ ಆರೋಪವನ್ನು ಅವರು ತಳ್ಳಿಹಾಕಿದರು. ಅಲ್ಲದೆ, ಸ್ಥಳೀಯ ಶಾಸಕರ ಸಲಹೆ ಅನುಸಾರವಾಗಿ ನೇಮಕ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

(ಏಜೆನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X