ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನು 2-3 ದಿನದಲ್ಲಿ ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಳ

By Staff
|
Google Oneindia Kannada News

ಇನ್ನು 2-3 ದಿನದಲ್ಲಿ ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಳ
ಸೀಮೆ ಎಣ್ಣೆ, ಅಡುಗೆ ಅನಿಲ ದರ ಹೆಚ್ಚಳಕ್ಕೆ ತುಸು ವಿನಾಯಿತಿ?

ನವದೆಹಲಿ : ಮುಂದಿನ ಎರಡು-ಮೂರು ದಿನಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳ ಆಗುವ ಸಾಧ್ಯತೆಗಳಿವೆ.

ಸುದ್ದಿಗಾರರಿಗೆ ಈ ಬಗ್ಗೆ ಸುಳಿವು ನೀಡಿರುವ ಕೇಂದ್ರ ಇಂಧನ ಸಚಿವರು, ಪ್ರಧಾನಿ ಜೊತೆ ಈ ಬಗ್ಗೆ ಮಾತುಕತೆ ನಡೆಸಿರುವುದಾಗಿ ಮಂಗಳವಾರ ತಿಳಿಸಿದ್ದಾರೆ.

ಬಡಜನತೆಗೆ ತೊಂದರೆಯಾಗುವುದರಿಂದ ಸೀಮೆ ಎಣ್ಣೆ, ಅಡುಗೆ ಅನಿಲ ದರ ಹೆಚ್ಚಳಕ್ಕೆ ವಿನಾಯಿತಿ ನೀಡುವ ಬಗ್ಗೆ, ಸರ್ಕಾರ ಚಿಂತನೆ ನಡೆಸಲಿದೆ ಎಂದು ಸಚಿವರು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಿಂದ ಇಂಧನ ದರ ಹೆಚ್ಚಳವನ್ನು ಎಡಪಕ್ಷಗಳ ವಿರೋಧದಿಂದ ಸರ್ಕಾರ ಮಾಡಿರಲಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್‌ ಮತ್ತು ಡಿಸೇಲ್‌ ದರ ಗಗನಕ್ಕೇರಿದೆ. ಹೀಗಾಗಿ ಬೆಲೆ ಹೆಚ್ಚಳ ಅನಿವಾರ್ಯ ಎನ್ನಲಾಗಿದೆ. ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂಧನ ದರ ಹೆಚ್ಚಳವನ್ನು ಸರ್ಕಾರ ಮುಂಡೂಡಿತ್ತು.

(ಏಜನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X