ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೈಕ್ಷಣಿಕ ಪ್ರಗತಿ : ಮೊದಲ ಸ್ಥಾನಕ್ಕೇರಲು ರಾಜ್ಯದ ಯತ್ನ

By Staff
|
Google Oneindia Kannada News

ಶೈಕ್ಷಣಿಕ ಪ್ರಗತಿ : ಮೊದಲ ಸ್ಥಾನಕ್ಕೇರಲು ರಾಜ್ಯದ ಯತ್ನ
ಪ್ರತಿ ವಿದ್ಯಾರ್ಥಿಗೆ 810 ರೂಪಾಯಿ ಖರ್ಚು, ಶಿಕ್ಷಣ ಸಮೃದ್ಧಿಗೆ ವ್ಯಾಪಕ ಕಾರ್ಯಕ್ರಮ -ಹೊರಟ್ಟಿ

ಗದಗ : ರಾಜ್ಯ ಶೈಕ್ಷಣಿಕವಾಗಿ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, ಗೋವಾ ಮತ್ತು ಕೇರಳ ಅನುಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿವೆ. ಮೊದಲ ಸ್ಥಾನ ಗಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಐದು ಸಾವಿರ ಶಿಕ್ಷಕರಿಗೆ ‘ಗುರುಸದನ’ ಎಂಬ ಮನೆಗಳನ್ನು ನಿರ್ಮಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದಕ್ಕಾಗಿ 350 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ವಿವರಿಸಿದರು.

ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ 30ಕೋಟಿ ರೂಪಾಯಿ ವೆಚ್ಚದಲ್ಲಿ ಪಠ್ಯಪುಸ್ತಕಗಳನ್ನು ಹಾಗೂ 93.5ಕೋಟಿ ರೂಪಾಯಿ ವೆಚ್ಚದಲ್ಲಿ ಸಮವಸ್ತ್ರಗಳನ್ನು ವಿತರಿಸಲಾಗುತ್ತಿದೆ. ಪ್ರತಿ ವಿದ್ಯಾರ್ಥಿಯ ಸಮವಸ್ತ್ರ ಹಾಗೂ ಪಠ್ಯಪುಸ್ತಕಕ್ಕೆ ತಲಾ 810ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದರು.

ಕಟ್ಟಡ-ಕುಡಿಯುವ ನೀರು ಮೊದಲಾದ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ, ಶೈಕ್ಷಣಿಕವಾಗಿ ಹಿಂದುಳಿದ ಉತ್ತರ ಕರ್ನಾಟಕದ 61 ಬ್ಲಾಕುಗಳನ್ನು ಮುಖ್ಯವಾಹಿನಿಗೆ ತರಲಾಗುವುದು ಎಂದು ಸಚಿವರು ಹೇಳಿದರು.

(ಏಜೆನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X