ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಯೋ ಟೆಕ್‌ ಪಾರ್ಕ್‌ಗೆ ಸಂಪುಟದ ಅನುಮೋದನೆ

By Staff
|
Google Oneindia Kannada News

ಬಯೋ ಟೆಕ್‌ ಪಾರ್ಕ್‌ಗೆ ಸಂಪುಟದ ಅನುಮೋದನೆ
ರಾಜ್ಯದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಪಾರ್ಕ್‌ ಪೂರಕ -ಚೆಲುವರಾಯಸ್ವಾಮಿ

ಬೆಂಗಳೂರು : 103 ಕೋಟಿ ವೆಚ್ಚದ ಬಯೋ ಟೆಕ್‌ ಪಾರ್ಕ್‌ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಾರಿಗೆ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ಭಾನುವಾರ ನಡೆದ ವಿಧಾನಮಂಡಲದ ಉಭಯ ಸದನಗಳ ವಿಶೇಷ ಸಭೆ ನಂತರ, ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬಯೋ ಟೆಕ್‌ ಪಾರ್ಕ್‌ ನಿರ್ಮಾಣಕ್ಕಾಗಿ 106 ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರ 14 ಕೋಟಿ ರೂ. ನೆರವು ನೀಡಲು ಮುಂದೆ ಬಂದಿದೆ. ಈಗಾಗಲೇ 11 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಸಚಿವರು ಹೇಳಿದರು.

ಬಯೋ ಟೆಕ್ನಾಲಜಿ ಕ್ಷೇತ್ರಕ್ಕೆ ಸಂಬಂಧಿಸಿದ ಐಬಿಎಬಿ, ಸಿಎಚ್‌ಸಿ, ಕೆಬಿಐಟಿಎಸ್‌ ವಿಭಾಗಗಳು, ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅವುಗಳಿಗೆ ಸ್ವಂತದ ಕಟ್ಟಡ ಒದಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಚೆಲುವರಾಯಸ್ವಾಮಿ ತಿಳಿಸಿದರು.

(ಯುಎನ್‌ಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X