ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಧನ ದರ ಹೆಚ್ಚಳ : ಬುಧವಾರ ರಾಷ್ಟ್ರವ್ಯಾಪಿ ಮುಷ್ಕರ

By Staff
|
Google Oneindia Kannada News

ಇಂಧನ ದರ ಹೆಚ್ಚಳ : ಬುಧವಾರ ರಾಷ್ಟ್ರವ್ಯಾಪಿ ಮುಷ್ಕರ
ಎರಡು ವರ್ಷದಲ್ಲಿ ಏಳು ಸಲ ಇಂಧನ ದರ ಹೆಚ್ಚಳ -ರಾಜನಾಥ ಸಿಂಗ್‌

ನವದೆಹಲಿ : ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳ ಮಾಡಿದ್ದನ್ನು ವಿರೋಧಿಸಿ, ಬುಧವಾರ ರಾಷ್ಟ್ರವ್ಯಾಪಿ ಮುಷ್ಕರ ಮತ್ತು ರಸ್ತೆ ತಡೆಗೆ ಭಾರತೀಯ ಜನತಾಪಕ್ಷ ಕರೆ ನೀಡಿದೆ.

ಪಕ್ಷದ ಅಧ್ಯಕ್ಷ ರಾಜನಾಥ್‌ ಸಿಂಗ್‌ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕೇಂದ್ರ ಸರ್ಕಾರ ಎಲ್ಲ ರಂಗದಲ್ಲೂ ವೈಫಲ್ಯ ಪ್ರದರ್ಶಿಸಿದೆ. ಇಂಧನ ದರ ಹೆಚ್ಚಳದಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ ಎಂದರು.

ಕಳೆದ ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ಕೇಂದ್ರ ಸರ್ಕಾರ ಏಳು ಸಲ ಇಂಧನ ದರ ಹೆಚ್ಚಳ ಮಾಡಿದೆ. ಸರ್ಕಾರದ ಜನವಿರೋಧಿ ನೀತಿಗಳನ್ನು ನಾವು ಸಹಿಸುವುದಿಲ್ಲ ಎಂದು ರಾಜನಾಥ ಸಿಂಗ್‌ ಹೇಳಿದರು.

(ಯುಎನ್‌ಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X