ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಲೆಬಿಸಿ ಸುದ್ದಿ ! : ಜುಲೈ 31ರಿಂದ ಹೆಲ್ಮೆಟ್‌ ಬಳಕೆ ಕಡ್ಡಾಯ

By Staff
|
Google Oneindia Kannada News

ತಲೆಬಿಸಿ ಸುದ್ದಿ ! : ಜುಲೈ 31ರಿಂದ ಹೆಲ್ಮೆಟ್‌ ಬಳಕೆ ಕಡ್ಡಾಯ
ಹಿಂಬದಿ ಸವಾರರಿಗೂ ಅನ್ವಯ, ಮೊಪೆಡ್‌ ವಿಚಾರ ಇನ್ನೂ ಗುಟ್ಟು

ಬೆಂಗಳೂರು : ಹೆಲ್ಮೆಟ್‌ ಕಡ್ಡಾಯವಾಗಿ ಧರಿಸಬೇಕೆಂಬ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೀಗಾಗಿ ಜುಲೈ 31ರಿಂದ ಹೆಲ್ಮೆಟ್‌ ಕಡ್ಡಾಯ ಬಳಕೆ ಜಾರಿಗೆ ಬರಲಿದೆ.

ಕಾನೂನು ಸಚಿವ ಬಸವರಾಜ ಹೊರಟ್ಟಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಜೂನ್‌ 30ರೊಳಗೆ ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯಪಡಿಸಬೇಕು ಎಂದು ನ್ಯಾಯಾಲಯ ಆದೇಶ ನೀಡಿತ್ತು. ಸಮಯ ಕಡಿಮೆ ಇರುವ ಕಾರಣ, ಜುಲೈ 31ರೊಳಗೆ ಈ ಆದೇಶ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರದ ನಿರ್ಧಾರದಿಂದಾಗಿ, ದ್ವಿಚಕ್ರ ವಾಹನ ಚಾಲಕರು ಹಾಗೂ ಹಿಂಬದಿ ಸವಾರರು ಹೆಲ್ಮೆಟ್ಟನ್ನು ಕಡ್ಡಾಯವಾಗಿ ಧರಿಸಬೇಕಾಗುತ್ತದೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಕುಮಾರ-ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X