• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕುಮಾರಸ್ವಾಮಿ, ಚೆನ್ನಿಗಪ್ಪಗೆ ಮಂಪರು ಪರೀಕ್ಷೆ-ಎಚ್‌ವಿ

By Staff
|

ಕುಮಾರಸ್ವಾಮಿ, ಚೆನ್ನಿಗಪ್ಪಗೆ ಮಂಪರು ಪರೀಕ್ಷೆ-ಎಚ್‌ವಿ
ಸಿ.ಡಿ.ಗಾಗಿ ಡಿ.ಕೆ.ಶಿವಕುಮಾರ್‌ ಕಚೇರಿಯಲ್ಲಿ ಪೊಲೀಸರ ಶೋಧ!?

ಬೆಂಗಳೂರು : ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಸಿ.ಚೆನ್ನಿಗಪ್ಪ ಮತ್ತು ವಿಧಾನ ಪರಿಷತ್‌ ಸದಸ್ಯ ಜನಾರ್ದನರೆಡ್ಡಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ಬಳ್ಳಾರಿ ಲಂಚ ಹಗರಣದ ಸತ್ಯವನ್ನು ಹೊರತೆಗೆಯಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮಾಜಿ ಸಚಿವ ಮತ್ತು ಕಾಂಗ್ರೆಸ್‌ ಮುಖಂಡ ಎಚ್‌.ವಿಶ್ವನಾಥ್‌, ಸುಮಾರು 150ಕೋಟಿ ರೂ. ಲಂಚ ಹಗರಣ ಮುಖ್ಯಮಂತ್ರಿಗಳ ವಿರುದ್ಧ ಕೇಳಿ ಬಂದಿದೆ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಮಂಪರು ಪರೀಕ್ಷೆ ಅತ್ಯಗತ್ಯ ಎಂದರು.

ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಕರ್ನಾಟಕ ರಾಜಕಾರಣದ ಬೆಳವಣಿಗೆಗಳನ್ನು ಕೇಂದ್ರ ಸರ್ಕಾರಕ್ಕೆ ವರದಿ ಮಾಡಬೇಕು. ಕೂಡಲೇ ರಾಜ್ಯ ಸರ್ಕಾರವನ್ನು ವಜಾಮಾಡಬೇಕು ಎಂದು ವಿಶ್ವನಾಥ್‌ ಒತ್ತಾಯಿಸಿದ್ದಾರೆ.

ಶಿವಕುಮಾರ್‌ ಕಚೇರಿ ತಡಕಾಟ : ಬಳ್ಳಾರಿ ಗಣಿ ಕಪ್ಪ ಪ್ರಕರಣದ ಪ್ರಮುಖ ಸಾಕ್ಷ್ಯವಾದ ಸಿ.ಡಿ.ಯಾಂದು ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಅವರ ಬಳಿ ಇರಬಹುದೆಂದು ಪೊಲೀಸರು ಅನುಮಾನಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಅವರ ಕಚೇರಿಯಲ್ಲಿ ಬಾಂಬ್‌ ಇಡಲಾಗಿದೆ ಎಂಬ ನೆಪವೊಡ್ಡಿ ಪೊಲೀಸರು ತಡಕಾಡಿದ್ದಾರೆ ಎನ್ನಲಾಗಿದೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಕುಮಾರ-ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X