ಕಳಸಾ-ಬಂಡೂರಿ ಕಾಮಗಾರಿ ಅ.2ರೊಳಗೆ ಆರಂಭ

ಕಳಸಾ-ಬಂಡೂರಿ ಕಾಮಗಾರಿ ಅ.2ರೊಳಗೆ ಆರಂಭ
ಭದ್ರಾ ಮೇಲ್ದಂಡೆ ಯೋಜನೆ ಆರಂಭಕ್ಕೂ ಬದ್ಧ -ಕೆ.ಎಸ್‌.ಈಶ್ವರಪ್ಪ

ಬೆಂಗಳೂರು : 46ವರ್ಷಗಳ ಹೋರಾಟ ಈಗ ಫಲಿಸಿದೆ. ಕಳಸಾ-ಬಂಡೂರಿ ನಾಲಾ ಯೋಜನೆಯನ್ನು ಅಕ್ಟೋಬರ್‌ 2ರ ಒಳಗಾಗಿ ಆರಂಭಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ.

ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡುತ್ತಿದ್ದ ಜಲಸಂಪನ್ಮೂಲ ಸಚಿವ ಕೆ.ಎಸ್‌.ಈಶ್ವರಪ್ಪ, ಕೇಂದ್ರ ಸರ್ಕಾರವು ಈ ಯೋಜನೆಗೆ ಸಮ್ಮತಿಸಿದೆ. ಗೋವಾ ಸರ್ಕಾರದ ಮನವೊಲಿಸಿ ತಡೆಯಾಜ್ಞೆಯನ್ನು ತೆರವುಗೊಳಿಸುವ ಪ್ರಯತ್ನವೂ ನಡೆದಿದೆ. ಹಿಂದಿನ ರಾಜ್ಯ ಸರ್ಕಾರ ಈ ಯೋಜನೆಗಾಗಿ 100 ಕೋಟಿ ರೂ. ತೆಗೆದಿರಿಸಿದೆ ಎಂದರು.

ಅದೇ ರೀತಿ ಭದ್ರಾ ಮೇಲ್ದಂಡೆ ಯೋಜನೆಯೂ ಜಾರಿಗೆ ಬರಲಿದೆ. ವಾರದೊಳಗೆ ಯೋಜನೆಗೆ ಅಂತಿಮ ರೂಪುರೇಷೆ ಸಿದ್ಧವಾಗಲಿದೆ. ಈ ಯೋಜನೆಗೆ 1000 ಕೋಟಿ ರೂ.ಗಳ ಅಗತ್ಯವಿದೆ. ಹೇಗೋ ಸಂಪನ್ಮೂಲ ಕ್ರೋಡೀಕರಿಸುವುದಾಗಿ ಈಶ್ವರಪ್ಪ ಹೇಳಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+