ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ತು ವರ್ಷ ದುಡಿದರೂ ಜೀವನವಿಡಿ ಪಿಂಚಣಿ ಉಂಟು!

By Staff
|
Google Oneindia Kannada News

ಹತ್ತು ವರ್ಷ ದುಡಿದರೂ ಜೀವನವಿಡಿ ಪಿಂಚಣಿ ಉಂಟು!
ಸಚಿವ ಸಂಪುಟ ತೀರ್ಮಾನ, ಸ್ವಯಂ ನಿವೃತ್ತಿ ಸೌಲಭ್ಯಗಳ ಪಡೆಯಲು 15ವರ್ಷ ಸೇವೆ ಕಡ್ಡಾಯ -ಹೊರಟ್ಟಿ

ಬೆಂಗಳೂರು : 10 ವರ್ಷಗಳ ಸರ್ಕಾರಿ ಸೇವೆ ಪೂರೈಸಿದವರು ಇನ್ನು ಮುಂದೆ ಪಿಂಚಣಿ ಸೌಲಭ್ಯಕ್ಕೆ ಅರ್ಹರಾಗಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸಂಪುಟ ಸಭೆಯ ಬಳಿಕ, ಈ ಕುರಿತು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಈ ಮೊದಲು ನಿವೃತ್ತಿ ನಂತರದ ಪಿಂಚಣಿ ಹಾಗೂ ಇನ್ನಿತರ ಸೌಲಭ್ಯ ಪಡೆಯಲು ಕನಿಷ್ಠ 15 ವರ್ಷಗಳ ಕಾಲ ಸೇವೆ ಸಲ್ಲಿಸಬೇಕಿತ್ತು. ಈಗ 5 ವರ್ಷ ಕಡಿತಗೊಳಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಅವರು ವಿವರಿಸಿದರು.

ಇತ್ತೀಚೆಗೆ ನಡೆದ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ನಿಗದಿಗೊಳಿಸಲಾಗಿತ್ತು. ಇವರು ನಿವೃತ್ತಿಯಾಗುವಾಗ 13 ವರ್ಷ ಸೇವೆ ಸಲ್ಲಿಸಿದಂತಾಗುತ್ತದೆ. ಆದರೆ ಹಿಂದಿನ ನಿಯಮದನ್ವಯ ಇವರಿಗೆ ಪಿಂಚಣಿ ಮೊದಲಾದ ಸೌಲಭ್ಯ ಸಿಗುತ್ತಿರಲಿಲ್ಲ. ಈ ರೀತಿ ನೇಮಕವಾಗುವವರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹೊಸ ನಿಯಮ ರೂಪಿಸಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ನೌಕರರು ಸ್ವಯಂ ನಿವೃತ್ತಿ ಪಡೆಯಲು ಕನಿಷ್ಠ 15 ವರ್ಷಗಳ ಸೇವೆ ಮಾಡಬೇಕು. ಆ ನಿಯಮ ಹಾಗೆಯೇ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಕುಮಾರ-ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X