ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಗ್ಲಿಷ್‌ ಕಲಿಕೆ ಅಚಲ : ಮುಖ್ಯಮಂತ್ರಿ ಪುನರುಚ್ಚಾರ...

By Staff
|
Google Oneindia Kannada News

ಬೆಂಗಳೂರು : ಒಂದನೇ ತರಗತಿಯಿಂದ ಇಂಗ್ಲಿಷ್‌ ಕಲಿಸುವ ಸರ್ಕಾರದ ನಿರ್ಧಾರ ಅಚಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.

ದಲಿತ ಹಾಗೂ ಜಾತ್ಯತೀತ ಜನಪರ ಸಂಘಟನೆಗಳು, ಈ ನಿರ್ಧಾರದಿಂದ ಹಿಂದೆ ಸರಿಯದಂತೆ ಮುಖ್ಯಮಂತ್ರಿಗಳಿಗೆ ಸೋಮವಾರ ಮನವಿ ಸಲ್ಲಿಸಿದವು. ಮನವಿ ಸ್ವೀಕರಿಸಿ ಮಾತನಾಡಿದ ಅವರು, ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದರ ಹಿಂದಿನ ಕಾಳಜಿ ಬಗ್ಗೆ ಸಾಹಿತಿಗಳು ಹಾಗೂ ಕನ್ನಡಪರ ಹೋರಾಟಗಾರರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಭಾಷಾಪ್ರೇಮದ ಹೆಸರಿನಲ್ಲಿ ನಡೆಯುವ ಇಂಗ್ಲಿಷ್‌ ವಿರೋಧಿ ಚಳವಳಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಮಾರಕವಾಗಬಾರದು. ಆದ್ದರಿಂದ ಎಲ್ಲ ಶಾಲೆಗಳಲ್ಲಿ ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಸಮರ್ಥಿಸಿಕೊಂಡರು.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X