ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ರಾಜ್ಯೋತ್ಸವ ಆಚರಣೆ : ಎಲ್ಲೆಲ್ಲಿ ಹೇಗೇಗೆ?

By Staff
|
Google Oneindia Kannada News

ಬೆಂಗಳೂರು : ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಬುಧವಾರ ಆಚರಿಸಲಾಗುತ್ತಿದೆ. ಈ ಮಧ್ಯೆ ಕೆಲವೆಡೆ ಅಹಿತಕರ ಘಟನೆಗಳು ನಡೆದಿವೆ.

ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇತೃತ್ವದಲ್ಲಿ ಧ್ವಜಾರೋಹಣ, ಪರಂಪರೆ ಬಿಂಬಿಸುವ ವರ್ಣಮಯ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ಪೆರೇಡ್‌ಗಳು ನಡೆದಿರುವ ಬಗ್ಗೆ ವರದಿಗಳು ಬರುತ್ತಿವೆ.

ಎಲ್ಲೆಲ್ಲಿ ಹೇಗೇಗೆ?

  • ಮೈಸೂರಿನಲ್ಲಿ ಶಾಸ್ತ್ರೀಯ ಭಾಷೆಗಾಗಿ ಒತ್ತಾಯಿಸಿ ನಾಡೋಜ ಪ್ರಶಸ್ತಿ ವಿಜೇತ ದೇ.ಜ.ಗೌ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಮತ್ತಿತರ ಕನ್ನಡ ಪರ ಸಂಘಟನೆಗಳು ಬೆಂಬಲ ನೀಡಿವೆ.
  • ಹೈದರಾಬಾದ್‌ ಕರ್ನಾಟಕ ಪ್ರಾಂತ್ಯವನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಗುಲ್ಬರ್ಗದಲ್ಲಿ, ಕರಾಳ ದಿನ ಆಚರಿಸಲಾಯಿತು. ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ್‌ ಪಾಟೀಲ್‌, ಪ್ರತ್ಯೇಕ ರಾಜ್ಯಧ್ವಜಾರೋಹಣ ಮಾಡಿದ್ದಾರೆ.
  • ಮಹಾಜನ್‌ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
  • ಬೆಳಗಾವಿಯಲ್ಲಿ ಎಂಇಎಸ್‌ ಇಂದು ಕರಾಳ ದಿನ ಆಚರಿಸಿದೆ. ಸುವರ್ಣ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಡ್ಡಿಪಡಿಸಿದೆ. ರಾಜ್ಯೋತ್ಸವದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದು, 65 ಜನರನ್ನು ಬಂಧಿಸಲಾಗಿದೆ.
  • ಶಾಸ್ತ್ರೀಯ ಭಾಷೆ ಸ್ಥಾನಮಾನ ಮತ್ತು ಮಹಾಜನ್‌ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಕ್ಷಾತೀತ ಹೋರಾಟ ನಡೆಸಲು ಉಪಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗದಲ್ಲಿ ಕರೆ ನೀಡಿದ್ದಾರೆ.
  • ಬೆಂಗಳೂರಿನ ಡಾ.ರಾಜ್‌ಕುಮಾರ್‌ ಸಮಾಧಿ ಬಳಿ ರಾಜ್ಯೋತ್ಸವ ಆಚರಣೆ. ರಾಘವೇಂದ್ರ ರಾಜ್‌ಕುಮಾರ್‌ ಧ್ವಜಾಹೋಹಣ ನೆರವೇರಿಸಿದರು. ರಾಜ್‌ ಕುಟುಂಬ ಹಾಜರಿತ್ತು.
  • ಕಾಸರಗೋಡು ಕನ್ನಡಿಗರು ಕರಾಳ ದಿನ ಆಚರಿಸುತ್ತಿದ್ದಾರೆ. ತಾಯಿನಾಡನ್ನು ಸೇರುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
  • ಉಡುಪಿಯಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ವಿ.ಎಸ್‌.ಆಚಾರ್ಯ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ 40ಜನ ಗಣ್ಯರನ್ನು ಸನ್ಮಾನಿಸಲಾಯಿತು.
(ದಟ್ಸ್‌ ಕನ್ನಡ ವಾರ್ತೆ)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X