ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿನಿಂದ ಹೆಲ್ಮೆಟ್‌ ಧರಿಸಿ; ನೂರು ರೂಪಾಯಿ ಉಳಿಸಿ!!!

By Staff
|
Google Oneindia Kannada News

ಬೆಂಗಳೂರು : ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಹೆಲ್ಮೆಟ್‌ ಕಡ್ಡಾಯ ನಿಯಮ ಬುಧವಾರ(ನವೆಂಬರ್‌ 1)ದಿಂದ ರಾಜ್ಯದ ಆರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಾಗಿದೆ.

ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಗುಲ್ಬರ್ಗಾ, ಮಂಗಳೂರು, ಬೆಳಗಾವಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಯಾಗಿದ್ದು, ಅಧಿಕ ತಾಪಮಾನದ ಹಿನ್ನೆಲೆಯಲ್ಲಿ ಬಳ್ಳಾರಿಗೆ ವಿನಾಯ್ತಿ ನೀಡಲಾಗಿದೆ.

ನಿಯಮ ಮುರಿದವರಿಗೆ ನೂರು ರೂಪಾಯಿ ದಂಡ ವಿಧಿಸಲಾಗುತ್ತದೆ. ಎರಡನೇ ಸಲ ನಿಯಮ ಉಲ್ಲಂಘಿಸಿದವರಿಗೆ 200, ಮೂರನೇ ಸಲ ನಿಯಮ ಉಲ್ಲಂಘಿಸಿದವರಿಗೆ 300 ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ. ಮಂಗಳವಾರ ರಾತ್ರಿಯಿಂದಲೇ ಬೆಂಗಳೂರಿನಲ್ಲಿ ಹೆಲ್ಮೆಟ್‌ ನಿಯಮ ಜಾರಿಗೆ ಬಂದಿದೆ.

ಬೈಸಿಕಲ್‌ ಹೊರತುಪಡಿಸಿ ಬ್ರೇಕ್‌ ಹಾರ್ಸ್‌ಪವರ್‌ ಇರುವ ಯಾವುದೇ ಮೋಟಾರ್‌ ಸೈಕಲ್‌, ಸ್ಕೂಟರ್‌, ಮೊಪೆಡ್‌ ಸವಾರರು ಹೆಲ್ಮೆಟ್‌ ಧರಿಸುವುದು ಕಡ್ಡಾಯ. ಹಿಂಬದಿ ಸವಾರರಿಗೆ ವಿನಾಯ್ತಿ ನೀಡುವ ಸಂಬಂಧ ಸಾರ್ವಜನಿಕರಿಂದ ಆಕ್ಷೇಪ ಅಥವಾ ಸಲಹೆಗಳನ್ನು ಆಹ್ವಾನಿಸಲಾಗಿದೆ. ನವೆಂಬರ್‌ 2ರವರೆಗೆ ಅಹವಾಲು ಸ್ವೀಕರಿಸಲಾಗುವುದು ಎಂದು ಗೃಹ ಖಾತೆ ಮೂಲಗಳು ಹೇಳಿವೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X