ಡಿ.4 : ಸಿದ್ದರಾಮಯ್ಯನ ಕ್ಷೇತ್ರದಲ್ಲಿ ರಾಜಕೀಯ ಸಮರ!
ಮೈಸೂರು : ಪ್ರತಿಷ್ಠಿತ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮರು ಚುನಾವಣೆ, ಡಿ.4ರಂದು ನಡೆಯಲಿದೆ. ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಪಾಲಿಗೆ ಈ ಚುನಾವಣೆ ಸತ್ವಪರೀಕ್ಷೆ.
ಚುನಾವಣಾ ಆಯೋಗ, ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ನ.17 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಚುನಾವಣೆಯ ಮತ ಎಣಿಕೆ ಡಿ.7ರಂದು ನಡೆಯಲಿದೆ.
ಚುನಾವಣಾ ದಿನಾಂಕ ಪ್ರಕಟಗೊಳ್ಳುವ ಮುನ್ನವೇ, ಕ್ಷೇತ್ರದಲ್ಲಿ ಅನಧಿಕೃತ ಚುನಾವಣಾ ಪ್ರಚಾರ ಆರಂಭಗೊಂಡಿದೆ. ಪದೇಪದೇ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯ ಆಯ್ಕೆಗೆ ಜೆಡಿಎಸ್ ಕಸರತ್ತು ಮುಂದುವರೆಸಿದೆ.
ಜೆಡಿಎಸ್ ತಂತ್ರಗಳಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಮುಖಭಂಗ ಸಾಧ್ಯವೇ? ಎನ್ನುವುದು ಸದ್ಯದ ರಾಜಕೀಯ ಕುತೂಹಲ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications