ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಸಚಿವರ ವರ್ತನೆಗೆ ಎಂ.ಪಿ.ಪ್ರಕಾಶ್‌ ಟೀಕೆ

By Staff
|
Google Oneindia Kannada News

ಬೆಂಗಳೂರು : ಗಡಿವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಆರ್‌ ಆರ್‌ ಪಾಟೀಲ್‌, ಕೇರಳ ಮುಖ್ಯಮಂತ್ರಿ ವಿ.ಎಸ್‌.ಅಚ್ಯುತಾನಂದನ್‌ ಅವರಿಗೆ ಪತ್ರ ಬರೆದಿದ್ದಾರೆ. ಈ ಧೋರಣೆಯನ್ನು ರಾಜ್ಯಗೃಹಸಚಿವ ಎಂ.ಪಿ.ಪ್ರಕಾಶ್‌ ಕಟುವಾಗಿ ಟೀಕಿಸಿದ್ದಾರೆ.

ಅವರು ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪಾಟೀಲ್‌ ವರ್ತನೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಕೇಂದ್ರ ಸಚಿವ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಈ ವಿಚಾರದಲ್ಲಿ ಮೌನ ವಹಿಸಿರುವುದು ಖಂಡನೀಯ. ಆದರೆ ಅಚ್ಯುತಾನಂದನ್‌, ಪಾಟೀಲ್‌ ಪತ್ರವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಗಡಿವಿಚಾರದಲ್ಲಿ ಮಹಾರಾಷ್ಟ್ರ ಹಾಗೂ ಕೇರಳಕ್ಕೆ(ಬೆಳಗಾವಿ ಹಾಗೂ ಕಾಸರಗೋಡು) ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ನಾವು ಕರ್ನಾಟಕದ ವಿರುದ್ಧ ನಾವು ಜಂಟಿ ಹೋರಾಟ ಮಾಡೋಣ’ ಎಂದು ಪಾಟೀಲ್‌, ಅಚ್ಯುತಾನಂದನ್‌ ಅವರಿಗೆ ಪತ್ರ ಬರೆದಿದ್ದರು ಎಂದು ಮಾಧ್ಯಮಗಳಲ್ಲಿ ಮಂಗಳವಾರ ವರದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X