ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

6 ವರ್ಷ ಕಾಡಿಸಿದ ಕುವೆಂಪು ವಿಶ್ವವಿದ್ಯಾಲಯಕ್ಕೆ ದಂಡ!

By Staff
|
Google Oneindia Kannada News

ದಾವಣಗೆರೆ : ವಿದ್ಯಾರ್ಥಿಗೆ ಪದವಿ ಪ್ರಮಾಣ ಪತ್ರವನ್ನು ನೀಡಲು ವಿಳಂಬ ಮಾಡಿದ ಕುವೆಂಪು ವಿಶ್ವವಿದ್ಯಾಲಯಕ್ಕೆ, ದಾವಣಗೆರೆ ಜಿಲ್ಲಾ ಗ್ರಾಹಕರ ಹಿತರಕ್ಷಣಾ ವೇದಿಕೆ, 2000 ರೂ. ದಂಡ ವಿಧಿಸಿದೆ.

ಜಿ.ಕೆ.ಶಿವರಾಜ್‌ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವೇದಿಕೆ ಅಧ್ಯಕ್ಷ ನಾಡಿಗ್‌ ಜಯಸ್ವಾಮಿ, ವಿಶ್ವವಿದ್ಯಾಲಯದ ಧೋರಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ 30ದಿನಗಳಲ್ಲಿ ಪದವಿ ಪ್ರಮಾಣ ಪತ್ರವನ್ನು ನೀಡಬೇಕೆಂದು ಸೂಚನೆ ನೀಡಿದ್ದಾರೆ.

ಹಿನ್ನೆಲೆ : ಶಿವರಾಜ್‌ ದಾವಣಗೆರೆಯ ಖಾಸಗಿ ಕಾಲೇಜಿನಲ್ಲಿ ಬಿ.ಎ. ವ್ಯಾಸಂಗ ಮಾಡಿದ್ದು, ಪದವಿ ಪ್ರಮಾಣ ಪತ್ರಕ್ಕಾಗಿ ಮನವಿ ಸಲ್ಲಿಸಿದ್ದರು. ಅವರು ಮನವಿ ಸಲ್ಲಿಸಿ ಆರು ವರ್ಷಗಳಾದರೂ ವಿಶ್ವವಿದ್ಯಾಲಯ ಈ ಬಗ್ಗೆ ಗಮನಹರಿಸದಿರುವುದು ಆಶ್ಚರ್ಯದ ಸಂಗತಿ. ಈ ಬಗ್ಗೆ ಅಸಮಾಧಾನಗೊಂಡ ಶಿವರಾಜ್‌, ಗ್ರಾಹಕರ ಹಿತರಕ್ಷಣಾ ವೇದಿಕೆಯಲ್ಲಿ ದೂರು ದಾಖಲಿಸಿದ್ದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X