ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಂಡು ದೇಹದಲ್ಲಿ ಮನೆಮಾಡಿದ್ದರೂ ಮನೆಗೆ ಮರಳಿದ ಕೋರೆ

By Staff
|
Google Oneindia Kannada News

ಬೆಂಗಳೂರು : ಕೌಟುಂಬಿಕ ಕಲಹದಿಂದ ಗುಂಟೇಟು ತಿಂದಿದ್ದ ವಿಧಾನ ಪರಿಷತ್ತು ಸದಸ್ಯ ಮತ್ತು ಕಾಂಗ್ರೆಸ್‌ ಮುಖಂಡ ಪ್ರಭಾಕರ ಕೋರೆ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ ಗುಂಡೊಂದನ್ನು ದೇಹದಲ್ಲಿಯೇ ಉಳಿದಿದೆ. ಆ ಗುಂಡಿನಿಂದ ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋರೆ, ಇದು ನನಗೆ ಸಿಕ್ಕಿದ ಪುನರ್ಜನ್ಮ. ಜನಸೇವೆಗೆ ಸಿಕ್ಕಿದ ಅವಕಾಶ. ಅಭಿಮಾನಿಗಳ ಪ್ರೀತಿಗೆ ನಾನು ಸದಾ ಋಣಿ ಎಂದು ಭಾವುಕರಾಗಿ ಹೇಳಿದರು.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅ.19ರಂದು ತಮ್ಮ ಅಣ್ಣನ ಮಗನಿಂದ ಗುಂಟೇಟಿಗೆ ಗುರಿಯಾಗಿದ್ದ ಕೋರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಈವರೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ಹದಿನೈದು ದಿನಗಳಲ್ಲಿ ಸಂಪೂರ್ಣವಾಗಿ ಕೋರೆ ಚೇತರಿಸಿಕೊಳ್ಳಲಿದ್ದಾರೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X