ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಿನಲ್ಲಿ ಎಲೆಕ್ಟ್ರಿಕ್‌ ಚಾಲಿತ ಸಾರ್ವಜನಿಕ ಬಸ್‌ಗಳು?

By Staff
|
Google Oneindia Kannada News

ಬೆಂಗಳೂರು : ವಿದ್ಯುತ್‌ ಚಾಲಿತ ಬಸ್‌ಗಳ ಸಂಚಾರವನ್ನು ಕರ್ನಾಟಕದಲ್ಲಿ ಪ್ರಾರಂಭಿಸುವ ಸರ್ಕಾರದ ಬಯಕೆ, ಕಾರ್ಯರೂಪಕ್ಕೆ ಬರುವ ದಿನಗಳು ಹತ್ತಿರದಲ್ಲಿವೆ.

ಮೊದಲ ಹಂತದಲ್ಲಿ ಮೈಸೂರಿನಲ್ಲಿ ಈ ಸೇವೆ ಆರಂಭಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಕೇಂದ್ರ ಸರ್ಕಾರ ಸಹಕಾರ ನೀಡುವ ಭರವಸೆ ನೀಡಿದೆ. ಎರಡನೇ ಹಂತದಲ್ಲಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಸೇವೆ ಆರಂಭಿಸುವ ಉದ್ದೇಶವನ್ನು ಕರ್ನಾಟಕ ಸರ್ಕಾರ ಹೊಂದಿದೆ.

ರಾಷ್ಟ್ರದಲ್ಲಿ ಮೊದಲ ಬಾರಿ ಸಾರ್ವಜನಿಕ ಸೇವೆಗೆ ಎಲೆಕ್ಟ್ರಿಕ್‌ ಬಸ್‌ಗಳನ್ನು ಬಳಸುವ ಹೆಗ್ಗಳಿಕೆ ರಾಜ್ಯಕ್ಕೆ ದಕ್ಕಲಿದೆ. ಈ ಬಸ್‌ಗಳು ಸುವರ್ಣ ಕರ್ನಾಟಕದ ಸಂದರ್ಭದಲ್ಲಿ ಜನರಿಗೆ ಸಿಕ್ಕ ಉಡುಗೊರೆಯಾಗಲಿವೆ. ಯೋಜನೆ ಅನುಷ್ಠಾನದ ಪ್ರಕ್ರಿಯೆಗಳು ಭರದಿಂದ ಸಾಗಿವೆ ಎಂದು ಸಾರಿಗೆ ಸಚಿವ ಎನ್‌.ಚೆಲುವರಾಯ ಸ್ವಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಬ್ಧ ಮತ್ತು ವಾಯುಮಾಲಿನ್ಯ ರಹಿತ ಈ ಎಲೆಕ್ಟ್ರಿಕ್‌ ಬಸ್‌ಗಳು ಪರಿಸರ ಸ್ನೇಹಿ ಎಂಬುದು ಮುಖ್ಯ ಅಂಶ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X