3500 ಉಪನ್ಯಾಸಕರ ಹುದ್ದೆಗಳಿವೆ! ಪ್ರಯತ್ನಿಸಲು ಸಕಾಲ!
ಬೆಂಗಳೂರು : ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ ನೇಮಕಾತಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿದೆ. ಇದರಿಂದ ರಾಜ್ಯದ ಕಾಲೇಜು ಮಂಡಳಿಗಳು, ಖಾಲಿಯಿರುವ 3500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಹಾಯಕವಾಗಲಿದೆ.
ನಿರ್ಬಂಧದ ಆದೇಶ ಹೊರಬಂದದ್ದರಿಂದ ನಿರುದ್ಯೋಗಿಗಳು ಮತ್ತು ಕಾಲೇಜು ಆಡಳಿತ ಮಂಡಳಿಗಳು ಹರ್ಷಗೊಂಡಿವೆ.
‘ಹಣ ಬಲ, ಒತ್ತಡದ ಬಲ ಉಳ್ಳವರು ಇಲ್ಲಿ ಪ್ರವೇಶ ಗಿಟ್ಟಿಸಬಹುದು. ಈ ಸಲ ಏನಾದರೂ ಮಾಡಲೇ ಬೇಕು. ಉಪನ್ಯಾಸಕನಾಗಿ ಯಾವುದಾದರೂ ಕಾಲೇಜಿಗೆ ನುಗ್ಗಲೇ ಬೇಕು ಎನ್ನುತ್ತಾರೆ ಕಳೆದ ನಾಲ್ಕು ವರ್ಷಗಳಿಂದ ಖಾಸಗಿ ಕಾಲೇಜಿನಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ನಗರದ ಉದ್ಯೋಗಾಕಾಂಕ್ಷಿಗಳಾದ ವಿ.ಎನ್.ಯತೀಶ, ನಾಗರಾಜ, ಅನಂತರಾಜ್, ರಂಗನಾಥ್ ಮತ್ತಿತರರು.
ಪೂರ್ಣ ವಿವರ : 1984ರಲ್ಲಿ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ ನೇಮಕಾತಿಗೆ ಸರ್ಕಾರ ನಿರ್ಬಂಧ ವಿಧಿಸಿತ್ತು. ಈಗ ತೆರವುಗೊಳಿಸಿರುವುದರಿಂದ, ರಾಜ್ಯ ಸರ್ಕಾರಕ್ಕೆ ಪ್ರತಿ ವರ್ಷ 60ರಿಂದ 70ಕೋಟಿ ಹೊರೆ ಬೀಳಲಿದೆ.
ಕಾಲೇಜು ಆಡಳಿತ ಮಂಡಳಿಗಳು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಬಹುದಾಗಿದ್ದು, ಈ ಸಂಬಂಧ ಸಮಿತಿಯಲ್ಲಿ ಸರ್ಕಾರದ ಪ್ರತಿನಿಧಿಯಾಬ್ಬರು ಇರುತ್ತಾರೆ. ಮೀಸಲಾತಿ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಈ ನಿಯಮ ಉಲ್ಲಂಘನೆಯಾದರೆ, ಅಂತಹ ನೇಮಕಾತಿಯನ್ನು ಯಾವುದೇ ಪೂರ್ವ ಸೂಚನೆ ಇಲ್ಲದೆ ಸರ್ಕಾರ ರದ್ದುಗೊಳಿಸಲಿದೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications