ಶಿವರಾಜ್ ಪಾಟೀಲ್ ಎನ್‌ಎಚ್‌ಆರ್‌ಸಿ ಹಂಗಾಮಿ ಅಧ್ಯಕ್ಷ
ಬೆಂಗಳೂರು : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್, ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಗುರುವಾರ(ನವೆಂಬರ್ 23)ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಡಿಸೆಂಬರ್ 1ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸ ಅಧ್ಯಕ್ಷರು ನೇಮಕವಾಗುವತನಕ ನ್ಯಾಯಮೂರ್ತಿ ಪಾಟೀಲ್ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಈ ಮೊದಲು ನ್ಯಾಯಮೂರ್ತಿ ಎ.ಎಸ್.ಆನಂದ್ ಆಯೋಗದ ಅಧ್ಯಕ್ಷರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಕನ್ನಡಿಗರು. ಕಳೆದ ವರ್ಷದ ಫೆಬ್ರವರಿಯಿಂದ ಅವರು ಆಯೋಗದ ಸದಸ್ಯರಾಗಿದ್ದಾರೆ.
(ಯುಎನ್‌ಐ)












Click it and Unblock the Notifications