ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯರಾತ್ರಿಯಿಂದಲೇ ಪೆಟ್ರೋಲ್‌-ಡೀಸೆಲ್‌ ಬೆಲೆ ಇಳಿಕೆ

By Staff
|
Google Oneindia Kannada News

ನವದೆಹಲಿ : ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯಲ್ಲಿ ಕ್ರಮವಾಗಿ 2ಹಾಗೂ 1ರೂಪಾಯಿ ಕಡಿತ ಮಾಡಿದೆ. ಹೊಸ ದರಗಳು ಬುಧವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿವೆ.

ಪೆಟ್ರೋಲಿಯಂ ಸಚಿವ ಮುರಳಿ ದೇವೊರಾ, ಬುಧವಾರ ರಾಜ್ಯಸಭೆಯಲ್ಲಿ ಈ ಕುರಿತು ಸ್ವಯಂಪ್ರೇರಿತ ಹೇಳಿಕೆ ನೀಡಿದರು.

ಅಂತಾರಾಷ್ಟ್ರೀಯ ತೈಲ(ಪೆಟ್ರೋಲ್‌, ಡೀಸೆಲ್‌) ಮಾರುಕಟ್ಟೆಯಲ್ಲಿ ಬೆಳೆ ಇಳಿಕೆಯಾಗಿದೆ. ಅಲ್ಲದೆ ಗ್ರಾಹಕರ ಹಿತಕಾಯುವ ನಿಟ್ಟಿನಲ್ಲಿ, ಬೆಲೆ ಕಡಿತಗೊಳಿಸುವಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಲೆ ಇಳಿಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಬೆಲೆ ಇಳಿಕೆ ಪೆಟ್ರೋಲ್‌ ಹಾಗೂ ಡೀಸೆಲ್‌ಗೆ ಮಾತ್ರ ಸಂಬಂಧಿಸಿದ್ದು, ಸೀಮೆ ಎಣ್ಣೆ ಹಾಗೂ ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಲಾರದು. ಹೊಸ ದರಗಳು ಸಾರ್ವಜನಿಕ ಸ್ವಾಮ್ಯದ ತೈಲ ಸಂಸ್ಥೆಗಳಲ್ಲಿ ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಯಾಗಲಿವೆ ಎಂದು ಅವರು ಸ್ಪಷ್ಟಪಡಿಸಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X