ಯಾಕೋ ಗೌಡ್ರು-ಕುಮಾರಣ್ಣನ ಗ್ರಹಚಾರ ನೆಟ್ಟಗಿಲ್ಲ!
ಬೆಂಗಳೂರು : ಚಾಮುಂಡೇಶ್ವರಿ ಉಪಚುನಾವಣೆಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಮುಜುಗರಕ್ಕೆ ಸಿಲುಕಿದೆ. ಮೊನ್ನೆಯಷ್ಟೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚುನಾವಣಾ ಆಯೋಗದಿಂದ ಛೀಮಾರಿಗೆ ಗುರಿಯಾಗಿದ್ದರು. ಈಗ ಅವರ ಸಂಪುಟದ ಇಬ್ಬರು ಸಚಿವರಿಗೆ ನೋಟಿಸ್ ಬಂದಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಚಿವರಾದ ಬಸವರಾಜ ಹೊರಟ್ಟಿ ಹಾಗೂ ಸಿ.ಚೆನ್ನಿಗಪ್ಪ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಜಾರಿಮಾಡಿದೆ. ಶುಕ್ರವಾರ ಮಧ್ಯಾಹ್ನ 3ಗಂಟೆಯಾಳಗೆ ಉತ್ತರಿಸುವಂತೆ ಸೂಚಿಸಿದೆ.
ಮತ್ತೊಂದು ಕಡೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡ, ಚುನಾವಣಾ ಆಯೋಗದ ಮೇಲಿನ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಚುನಾವಣಾ ಆಯೋಗ ಕಾಂಗ್ರೆಸ್‌ನ ಏಜೆಂಟ್‌ನಂತೆ ವರ್ತಿಸುತ್ತಿದೆ ಎಂದು ಅವರು ದೂರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications