ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಕವಿ ಜಿಎಸ್‌ಎಸ್‌ಗೆ ಮತ್ತೊಂದು ಗೌರವ ಡಾಕ್ಟರೇಟ್‌

By Staff
|
Google Oneindia Kannada News

ಬೆಂಗಳೂರು : ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪ ಸೇರಿದಂತೆ ಮೂವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಪ್ರಶಸ್ತಿ ಪ್ರಕಟಿಸಿದೆ.

ವಿವಿ ಕುಲಪತಿ ಡಾ.ಎಚ್‌.ಎ.ರಂಗನಾಥ್‌ ಶನಿವಾರ(ಡಿಸೆಂಬರ್‌ 02) ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಹಿರಿಯ ನಟಿ ಬಿ.ಸರೋಜಾದೇವಿ ಹಾಗೂ ರೈಟ್‌ ಲೈವ್ಲಿಹುಡ್‌ ಪ್ರಶಸ್ತಿ ವಿಜೇತ ಸಾಮಾಜಿಕ ಕಾರ್ಯಕರ್ತೆ ರುತ್‌ ಮನೋರಮಾ ಅವರಿಗೂ ಗೌರವ ಡಾಕ್ಟರೇಟ್‌ ಪ್ರಶಸ್ತಿ ನೀಡಲಾಗುತ್ತಿದೆ. 2007ರ ಜನವರಿ 6ರಂದು ನಡೆಯುವ ವಿವಿ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ವಿವರಿಸಿದರು.

ಇತ್ತೀಚೆಗಷ್ಟೇ ಕುವೆಂಪು ವಿಶ್ವವಿದ್ಯಾಲಯ ಕೂಡ ಡಾ.ಜಿ.ಎಸ್‌.ಶಿವರುದ್ರಪ್ಪ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X