ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಯೋಕಾನ್‌ ಒಡೆತನದ ಹೊಸ ಕಟ್ಟಡ ಕುಸಿದು 3 ಸಾವು

By Staff
|
Google Oneindia Kannada News

ಬೆಂಗಳೂರು : ಬಯೋಕಾನ್‌ ಒಡೆತನದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಚಾವಣಿ ಕುಸಿದು, ಮೂವರು ಕಾರ್ಮಿಕರು ಬುಧವಾರ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಘಟನೆ ಬಗ್ಗೆ ಹೆಚ್ಚುವರಿ ಪೋಲೀಸ್‌ ಮಹಾನಿರ್ದೇಶಕ ಶಂಕರ್‌ ಬಿದರಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಕಟ್ಟಡದ ಮೂರನೇ ಮಹಡಿಯಲ್ಲಿ ನಿರ್ಮಾಣ ಕೆಲಸ ನಡೆಯುತ್ತಿತ್ತು. ಚಾವಣಿಗೆ ನೀಡಲಾಗಿದ್ದ ಆಧಾರ ಸ್ತಂಭಗಳು ಕುಸಿದು, ಅಲ್ಲಿ ಕೆಲಸ ಮಾಡುತ್ತಿದ್ದ ಮೂವರ ಸಾವಿಗೆ ಕಾರಣವಾಗಿದೆ. ಸಾಕಷ್ಟು ಜನರಿಗೆ ಗಾಯಗಳಾಗಿವೆ ಎಂದು ಬಿದರಿ ತಿಳಿಸಿದ್ದಾರೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X