ದೆಹಲಿಗೆ ಕುಮಾರಸ್ವಾಮಿ, ಡಿ.9ರ ಜನತಾದರ್ಶನ ರದ್ದು
ಬೆಂಗಳೂರು : ಶನಿವಾರ(ಡಿ.9) ನವದೆಹಲಿಯಲ್ಲಿ ನಡೆಯಲಿರುವ 52ನೇ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಪ್ರಧಾನಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಗಾಗಿ ಶನಿವಾರ ಸಂಜೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಗಳ ಅನುಪಸ್ಥಿತಿಯಿಂದಾಗಿ ಶನಿವಾರ ನಡೆಯಬೇಕಿದ್ದ ಜನತಾದರ್ಶನ ಕಾರ್ಯಕ್ರಮ ರದ್ದಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications