ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರ್ಯವೈಖರಿ ಬದಲಿಸಿಕೊಳ್ಳಿ : ಸಿಎಂ, ಡಿಸಿಎಂ ಉಪದೇಶ

By Staff
|
Google Oneindia Kannada News

ಬೆಂಗಳೂರು : ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿದ್ದು, ಅಧಿಕಾರಿಗಳು ತಮ್ಮ ಕಾರ್ಯವೈಖರಿ ಬದಲಾಯಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ(ಡಿಸೆಂಬರ್‌ 18) ನಡೆದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ವಸತಿ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪ್ರಗತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಹಣ ಖರ್ಚು ಮಾಡಿದ್ದೇವೆಂದು ನಿಮ್ಮ ಬೆನ್ನು ನೀವೇ ತಟ್ಟಿಕೊಂಡರೆ ಸಾಲದು. ಹಣ ಸದ್ಬಳಕೆ ಆಗಿದೆಯೇ ಎಂಬುದು ಮುಖ್ಯ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ ಎಂದು ಅವರು ಹೇಳಿದರು.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X