ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯಭಾಗ್ಯ : ವಿಶ್ವಬ್ಯಾಂಕ್‌ನಿಂದ ಕೋಟ್ಯಂತರ ಹಣ

By Staff
|
Google Oneindia Kannada News

ಬೆಂಗಳೂರು : 897.79 ಕೋಟಿ ರೂ.ಗಳ ವಿಶ್ವ ಬ್ಯಾಂಕ್‌ ನೆರವಿನ ಆರೋಗ್ಯ ಯೋಜನೆಗೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಚಾಲನೆ ನೀಡಿದ್ದಾರೆ.

ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಈ ಯೋಜನೆಯ ಆರಂಭದಿಂದ ನನ್ನ ಮನಸ್ಸಿಗೆ ನೆಮ್ಮದಿಯಾಗಿದೆ. ಯೋಜನೆಯ ಹಣ ಸದ್ಬಳಕೆಯಾಗುವಂತೆ ಎಚ್ಚರವಹಿಸಲಾಗುವುದು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ವೈದ್ಯಕೀಯ ಸೇವೆಗಳು ಮತ್ತು ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತುರ್ತು ಚಿಕಿತ್ಸೆಗಳು ಲಭ್ಯವಾಗಲಿವೆ ಎಂದು ಕುಮಾರಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಆರ್‌.ಅಶೋಕ್‌ ಉಪಸ್ಥಿತರಿದ್ದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X