ಬೆಳಗಾವಿ ವಿಮಾನ ನಿಲ್ದಾಣಕ್ಕೆ 45 ಕೋಟಿ - ಶ್ರೀರಾಮುಲು
ಬೆಂಗಳೂರು : ಭೂಸ್ವಾಧೀನಪಡಿಸಿಕೊಳ್ಳಲು, ಬೆಳಗಾವಿ ವಿಮಾನ ನಿಲ್ದಾಣಕ್ಕೆ 45ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ತಲಾ 20 ಕೋಟಿ ರೂಪಾಯಿ ವೆಚ್ಚದಲ್ಲಿ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಬೆಳಗಾವಿ ನಿಲ್ದಾಣ 300 ಎಕರೆ, ಹುಬ್ಬಳ್ಳಿ ನಿಲ್ದಾಣ 400 ಎಕರೆ ಭೂಮಿ ಪಡೆಯಲಿವೆ ಎಂದು ವಿವರಿಸಿದರು.
ಇದಲ್ಲದೆ ಕಲ್ಬುರ್ಗಿ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲು 1 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications