ಬಂಗಾರಪ್ಪ ಕಂಡಂತೆ; ಜೆಡಿಎಸ್ ವಂಚನೆ, ಸಮ್ಮೇಳನ!

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಜೆಡಿಎಸ್ ಪಾಲಿನ ಆಡಳಿತಾವಧಿ ಮುಗಿಯುತ್ತಿದ್ದಂತೆಯೇ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷಗಳ ಒಪ್ಪಂದಾನುಸಾರ, ಜೆಡಿಎಸ್ ಬಿಜೆಪಿಗೆ ಅಧಿಕಾರ ಬಿಟ್ಟುಕೊಡುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಪಕ್ಷ ಬಲಪಡಿಸುವ ಸಲುವಾಗಿ ರಾಜ್ಯದ ಹಲವಾರು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದೇನೆ. ಪರಿಸ್ಥಿತಿಗೆ ಅನುಗುಣವಾಗಿ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಆದರೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಜೊತೆಗೆ ಯಾವುದೇ ರೀತಿಯ ಸಂಬಂಧ ಬೆಳೆಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪರಿಷತ್ತು ತಪ್ಪಿಲ್ಲ : ಸಾಹಿತ್ಯ ಸಮ್ಮೇಳನ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ ಎಂದು ಎದ್ದಿರುವ ವಿವಾದದ ಕುರಿತು ಮಾತನಾಡಿ, ಸಮ್ಮೇಳನ ಉದ್ಘಾಟನೆಗೆ ಸಾಮಾನ್ಯವಾಗಿ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುತ್ತಿದೆಯಾದರೂ ಸಾಹಿತ್ಯ ಪರಿಷತ್ ಸರ್ಕಾರದ ಅಂಗಸಂಸ್ಥೆಯಲ್ಲವಾದ್ದರಿಂದ ಯಾವುದೇ ಶಿಷ್ಟಾಚಾರವಿಲ್ಲ. ಕನ್ನಡ ಅಭಿವೃದ್ಧಿಯ ಏಕೈಕ ಗುರಿಯಿಂದ ಎಲ್ಲರೂ ಸಮ್ಮೇಳನಕ್ಕೆ ಬರಬೇಕು ಎಂದು ಹೇಳಿದರು.
(ಯುಎನ್‌ಐ)












Click it and Unblock the Notifications