ಬಿಜೆಪಿ ಜತೆ ಹನಿಮೂನ್ : ದೇವೇಗೌಡ ಜೆಡಿಎಸ್‌ನಿಂದ ಉಚ್ಚಾಟನೆ
ತಿರುವನಂತಪುರಂ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜಾತ್ಯತೀತ ಜನತಾದಳ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಶುಕ್ರವಾರ ಉಚ್ಚಾಟನೆಗೊಂಡಿದ್ದಾರೆ.
ನಗರದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ವಿಷಯ ಪ್ರಕಟಿಸಲಾಯಿತು.
ಪಕ್ಷದ ಜಾತ್ಯತೀತ ಸಿದ್ಧಾಂತಗಳಿಗೆ ತಿಲಾಂಜಲಿ ನೀಡಿ, ಬಿಜೆಪಿ ಜೊತೆ ಸೇರಿ ಕರ್ನಾಟಕದಲ್ಲಿ ಸರ್ಕಾರ ರಚಿಸಿರುವ ಆಪಾದನೆ ಹೊರೆಸಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲದೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಅವರನ್ನು ಉಚ್ಚಾಟಿಸಲಾಗಿದೆ.
ಹೊಸ ಅಧ್ಯಕ್ಷರನ್ನು ಶನಿವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಲಾಗುವುದು.
(ಏಜನ್ಸೀಸ್)












Click it and Unblock the Notifications