ಕಲ್ಬುರ್ಗಿ ಅವರ ‘ಮಾರ್ಗ’ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಬೆಂಗಳೂರು : ಕನ್ನಡದ ಹಿರಿಯ ಸಂಶೋಧಕ ಪ್ರೊ.ಎಂ.ಎಂ.ಕಲ್ಬುರ್ಗಿ, ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕಲ್ಬುರ್ಗಿಯವರ ‘ಮಾರ್ಗ’ ಎಂಬ ಪ್ರಬಂಧ ಸಂಕಲನಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ. ಪ್ರಶಸ್ತಿ 50ಸಾವಿರ ರೂಪಾಯಿ ನಗದು, ಫಲಕ ಹಾಗೂ ಸ್ಮರಣಿಕೆ ಒಳಗೊಂಡಿದೆ.
2007ರ ಫೆಬ್ರವರಿ 20ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ವರ್ಷ ಒಟ್ಟು 23 ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ವಿಜಾಪುರ ಜಿಲ್ಲೆ, ಸಿಂದಗಿ ತಾಲ್ಲೂಕಿನ ಯರಗಲ್ ಗ್ರಾಮದವರಾದ ಕಲ್ಬುರ್ಗಿ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿಯೂ ಗಮನಾರ್ಹ ಕೆಲಸ ಮಾಡಿದ್ದಾರೆ. ಕರ್ನಾಟಕ ಸರ್ಕಾರ ನೀಡುವ ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಅವರಿಗೆ ಸಂದಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications