ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು-ಲಾರಿ ಡಿಕ್ಕಿ : 5 ಸಾವು
ಬೆಂಗಳೂರು : ಬೆಂಗಳೂರು-ಪುಣೆ ನಡುವಿನ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಕಾರು ಮತ್ತು ಲಾರಿಯ ಮುಖಾಮುಖಿ ಡಿಕ್ಕಿಯಿಂದ, ಐವರು ಮೃತಪಟ್ಟಿದ್ದಾರೆ.
ಮಂಗಳವಾರ ಬೆಳಗ್ಗೆ , ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವಸಂದ್ರ ಬಳಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ಸಂಪೂರ್ಣವಾಗಿ ಹಾಳಾಗಿದೆ. ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದು, ಹೆಚ್ಚಿನ ವಿವರಗಳು ತಿಳಿದು ಬಂದಿಲ್ಲ.
ಅಪಘಾತದಿಂದ ವಾಹನದಟ್ಟಣೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಎರಡುಗಂಟೆಗಳ ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
(ಯುಎನ್‌ಐ)












Click it and Unblock the Notifications