ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನೂ ಎಂಟು ಸಾವಿರ ಪ್ರಾಥಮಿಕ ಶಿಕ್ಷಕರ ಹುದ್ದೆ ಭರ್ತಿ!

By Staff
|
Google Oneindia Kannada News

ಬೆಂಗಳೂರು : ಪ್ರಾಥಮಿಕ ಶಿಕ್ಷಕರ ತರಬೇತಿ(ಟಿಸಿಎಚ್‌) ಮುಗಿಸಿ, ಮನೆಯಲ್ಲಿ ಕೂತವರಿಗೊಂದು ಶುಭ ಸಮಾಚಾರ. ಒಂದಲ್ಲ, ಎರಡಲ್ಲ, ಸುಮಾರು ಎಂಟು ಸಾವಿರ ಪ್ರಾಥಮಿಕ ಶಿಕ್ಷಕರ ಹುದ್ದೆಗಳನ್ನು ತುಂಬಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಮುಂದಿನ ಹದಿನೈದು ದಿನಗಳ ಒಳಗಾಗಿ ಆದೇಶ ಹೊರಡಿಸಲಾಗುವುದು ಎಂಬ ವಿಚಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಂ.ಮದನ್‌ಗೋಪಾಲ್‌, ಸಮಾರಂಭವೊಂದರಲ್ಲಿ ಹೇಳಿದ್ದಾರೆ.

ಪ್ರಸ್ತುತ 6ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಇನ್ನೂ 8ಸಾವಿರ ಪ್ರಾಥಮಿಕ ಶಿಕ್ಷಕರ ಹುದ್ದೆಗಳನ್ನು ತುಂಬಲು ಸರ್ಕಾರ ನಿರ್ಧರಿಸಿದೆ. ಪ್ರತಿವರ್ಷ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 8ಸಾವಿರ ಹುದ್ದೆಗಳು ಖಾಲಿಯಾಗುತ್ತಿವೆ. ಹುದ್ದೆಗಳ ಭರ್ತಿ ಮಾಡುವಂತೆ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರ ಗಮನ ಸೆಳೆಯಲಾಗಿದೆ ಎಂದು ಮದನ್‌ಗೋಪಾಲ್‌ ತಿಳಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X