ಫೆ.23ರಿಂದ ಬೆಳಗಾವಿಯಲ್ಲಿ 2ನೇ ವಿಶ್ವ ಕನ್ನಡ ಸಮ್ಮೇಳನ
ಬೆಂಗಳೂರು : ಎರಡನೇ ವಿಶ್ವ ಕನ್ನಡ ಸಮ್ಮೇಳನ ಬೆಳಗಾವಿಯಲ್ಲಿ ಫೆ.23ರಿಂದ 25ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ.
ಗಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಸಮ್ಮೇಳನದ ಮೂಲಕ ಮತ್ತೊಮ್ಮೆ, ಕನ್ನಡ ಜಾತ್ರೆಯಲ್ಲಿ ಪಾಲ್ಗೊಳ್ಳುವ ಅವಕಾಶ ವಿಶ್ವಕನ್ನಡಿಗರಿಗೆ ಸಿಕ್ಕಿದೆ. ರಾಜ್ಯ ಸುವರ್ಣ ಕರ್ನಾಟಕದ ಸಡಗರದಲ್ಲಿರುವ ಸಂದರ್ಭದಲ್ಲಿ ಈ ವಿಶ್ವಕನ್ನಡ ಸಮ್ಮೇಳನ ಮಹತ್ವ ಪಡೆದಿದೆ.
ಸಮ್ಮೇಳನಕ್ಕಾಗಿ 10ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಬೆಳಗಾವಿಯ ನೆಹರೂ ಕ್ರೀಡಾಂಗಣದಲ್ಲಿ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಶಾಲಿನಿ ರಜನೀಶ್ ಹೇಳಿದ್ದಾರೆ.
1985ರಲ್ಲಿ ಮೊದಲ ವಿಶ್ವ ಕನ್ನಡ ಸಮ್ಮೇಳನ ರಾಮಕೃಷ್ಣ ಹೆಗಡೆ ಅಧಿಕಾರವಧಿಯಲ್ಲಿ ಮೈಸೂರಿನಲ್ಲಿ ಜರುಗಿತ್ತು. ಕುವೆಂಪು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications