ಸ್ಥಳೀಯ ಸಂಸ್ಥೆ ಚುನಾವಣೆ: ನನೆಗುದಿಗೆ ಬಿದ್ದ ಮೈತ್ರಿ
ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಸಂಬಂಧ ಮಿತ್ರ ಪಕ್ಷಗಳಲ್ಲಿ ಗೊಂದಲ ಮುಂದುವರಿದಿದ್ದು, ಪ್ರತ್ಯೇಕವಾಗಿ ಸ್ಪರ್ಧಿಸುವ ಇರಾದೆ ಎರಡೂ ಪಕ್ಷಗಳಲ್ಲಿ ವ್ಯಕ್ತವಾಗಿದೆ.
ಉಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ(ಡಿಸೆಂಬರ್ 28) ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹೊಂದಾಣಿಕೆ ಸಾಧ್ಯವಾಗದಿದ್ದಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ ಎಂದು ಘೋಷಿಸಿದರು.
ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಡಿ.ವಿ.ಸದಾನಂದಗೌಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆದರೆ ಚುನಾವಣಾ ಮೈತ್ರಿ ಬಗ್ಗೆ 10ದಿನಗಳಲ್ಲಿ ನಿರ್ಧಾರ ಹೊರಬೀಳಲಿದೆ ಎಂದು ಹೇಳಿದರು.
ಮಾತು-ಮರುಮಾತು : ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಹೊಂದಾಣಿಕೆ ಮಾಡಿಕೊಂಡು ಎದುರಿಸಬೇಕೆಂಬ ಆಶಯ ಎರಡೂ ಪಕ್ಷಗಳಲ್ಲಿ ಕೇಳಿ ಬಂದಿತ್ತಾದರೂ, ಇತ್ತೀಚೆಗಷ್ಟೇ ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ.ದೇವೇಗೌಡ ತಮ್ಮ ಪಕ್ಷ ಎಲ್ಲ ಸ್ಥಾನಗಳಿಗೂ ಪ್ರತ್ಯೇಕವಾಗಿ ಸ್ಫರ್ಧಿಸಲಿದೆ ಎಂದು ಹೇಳಿದ್ದರು.
ಆನಂತರ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯ ನಾಯ್ಡು, ಜೆಡಿಎಸ್‌ಗೆ ಚುನಾವಣಾ ಮೈತ್ರಿ ಬೇಡವಾದರೆ ನಮಗೂ ಬೇಡ ಎಂದು ಪ್ರತ್ಯುತ್ತರ ನೀಡಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications