ಜ.25ರಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ
ಬೆಂಗಳೂರು : ಹದಿನೈದು ದಿನಗಳ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ, ಜನವರಿ 25ರಿಂದ ಆರಂಭಗೊಳ್ಳಲಿದೆ.
ಹೊಸ ವರ್ಷದ ಮೊದಲ ಅಧಿವೇಶನ ಇದಾಗಲಿದ್ದು, ಜ.25ರಂದು ಬೆಳಗ್ಗೆ 11ಗಂಟೆಗೆ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಅಭಿವೃದ್ಧಿ ಮತ್ತು ವಿವಿಧ ಸಮಸ್ಯೆಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರಲಿವೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಅಧಿಕಾರಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications