ಅಪಘಾತ : ಹೈಕೋರ್ಟ್ ಮುಖ್ಯನ್ಯಾಯಾಧೀಶರು ಪಾರು
ಮಂಡ್ಯ : ಮದ್ದೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಸಿರಿಯಾಕ್ ಜೋಸೆಫ್, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಖ್ಯ ನ್ಯಾಯಾಧೀಶರ ಕಾರಿನ ಹಿಂಭಾಗಕ್ಕೆ, ಬೆಂಗಾವಲು ಪಡೆದ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸಿರಿಯಾಕ್ ಜೋಸೆಫ್ ಅವರು ಸುರಕ್ಷಿತವಾಗಿದ್ದು, ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಿಂದ ಮೈಸೂರಿಗೆ ಸಿರಿಯಾಕ್ ಜೋಸೆಫ್ ಪ್ರಯಾಣ ಮಾಡುತ್ತಿದ್ದರು. ಅಪಘಾತದ ನಂತರ ಮತ್ತೊಂದು ಕಾರಿನಲ್ಲಿ ಅವರು ಮೈಸೂರಿಗೆ ತೆರಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications