ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್‌ಎಸ್‌ಎಸ್‌ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಸಿಡಿಮಿಡಿ

By Staff
|
Google Oneindia Kannada News

ಬೆಂಗಳೂರು : ಶಿವಾಜಿನಗರದಲ್ಲಿ ನಡೆದ ಕೋಮು ಗಲಭೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜ್ಯಪಾಲರಿಗೆ ಕಾಂಗ್ರೆಸ್‌ ಪಕ್ಷ ಬುಧವಾರ ಮನವಿ ಸಲ್ಲಿಸಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂತಹ ಕೋಮುಗಲಭೆಗಳನ್ನು ನಿರ್ಲಕ್ಷ್ಯ ಮಾಡಬಾರದು. ನ್ಯಾಯಾಂಗ ತನಿಖೆ ಬೇಡವೆನ್ನುವ ರಾಜ್ಯ ಸರ್ಕಾರದ ವರ್ತನೆ ಖಂಡನೀಯ. ಕೂಡಲೇ ತನಿಖೆಗೆ ರಾಜ್ಯಪಾಲರು ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

ಶಿವಾಜಿನಗರದ ಕೋಮು ಗಲಭೆಗೆ ಆರ್‌ಎಸ್‌ಎಸ್‌ ಸಹಾ ಕಾರಣ. ಆರ್‌ಎಸ್‌ಎಸ್‌ ಆಯೋಜಿಸುವ ಸಮಾಜೋತ್ಸವಗಳಿಂದ ಸಮಾಜದಲ್ಲಿ ಒಡಕು ಉಂಟಾಗುತ್ತಿದೆ. ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯಲಾಗುತ್ತಿದೆ ಎಂದು ಖರ್ಗೆ ಅಭಿಪ್ರಾಯಪಟ್ಟರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X