ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಂಕಣಿಗೆ ತೃತೀಯ ಭಾಷೆ ಸ್ಥಾನಮಾನ -ಕುಮಾರಸ್ವಾಮಿ

By Staff
|
Google Oneindia Kannada News

ಬೆಂಗಳೂರು : ಕೊಂಕಣಿ ಭಾಷಿಗರ ಭಾವನೆಗಳು ನನಗೆ ಅರ್ಥವಾಗುತ್ತವೆ. ಕೊಂಕಣಿಗೆ ತೃತೀಯ ಭಾಷೆ ಸ್ಥಾನಮಾನ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸೇಂಟ್‌ ಜೋಸೆಫ್‌ ಇಂಡಿಯನ್‌ ಹೈಸ್ಕೂಲ್‌ನಲ್ಲಿ ನಡೆದ ಕೊಂಕಣಿ ಕ್ಯಾಥಲಿಕ್‌ ಒಕ್ಕೂಟದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

ನಾಡಿನ ಕರಾವಳಿ ಜಿಲ್ಲೆಗಳ ಬಹುತೇಕ ಜನತೆಯ ಆಶಯವನ್ನು ಸರ್ಕಾರ ಗೌರವಿಸುತ್ತದೆ. ಕೊಂಕಣಿಯನ್ನು ತೃತೀಯ ಭಾಷೆಯಾಗಿ ಅಧ್ಯಯನ ಮಾಡಲು ಸರ್ಕಾರ ಅವಕಾಶ ಕಲ್ಪಿಸಲಿದೆ. ಈ ಬಗ್ಗೆ ಶೀಘ್ರದಲ್ಲಿಯೇ ಸಂಪುಟದ ಒಪ್ಪಿಗೆ ಪಡೆಯುವುದಾಗಿ ಹೇಳಿದರು.

ರಾಜ್ಯ ಅಲ್ಪಸಂಖ್ಯಾತರ ಆಯೋಗ ಮತ್ತು ನಿಗಮ ಮಂಡಳಿಗಳಲ್ಲಿ ಕೊಂಕಣಿ ಕ್ಯಾಥಲಿಕ್‌ ಗಣ್ಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವುದಾಗಿ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X