ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್‌ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ -ಆಲಂಗೂರು

By Staff
|
Google Oneindia Kannada News

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಪೌರಾಡಳಿತ ಸಚಿವ ಆಲಂಗೂರು ಶ್ರೀನಿವಾಸ್‌, ರಾಜ್ಯದ ಸುಮಾರು ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ನಗರಸಭೆ ಅಧಿಕಾರವಧಿ ಮುಕ್ತಾಯವಾಗಿದೆ. ಆದರೆ ಶಾಲಾ ಮಕ್ಕಳ ಪರೀಕ್ಷೆಗಳು ಸಮೀಪದಲ್ಲಿಯೇ ಇದೆ. ಈ ದೃಷ್ಟಿಯಿಂದ ಚುನಾವಣೆಯನ್ನು ಮುಂದೂಡುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಮೀಸಲಾತಿಗೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಪಷ್ಟನೆ ಕೋರಿದ್ದಾರೆ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ನಡೆದಿದೆ. ಫೆಬ್ರವರಿ ಅಂತ್ಯದೊಳಗೆ ಚುನಾವಣಾ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಎಂದು ಸಚಿವರು ಹೇಳಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X