‘ಬಡ-ರೈತರ ಕಲ್ಯಾಣ’ಕ್ಕೆ ಹಣ ಸಂಗ್ರಹಕ್ಕೆ ತೆರಿಗೆ ಹೆಚ್ಚಳ?
ಬೆಂಗಳೂರು : ಸಾರಾಯಿ ಮತ್ತು ಲಾಟರಿ ನಿಷೇಧ, ರೈತರ ಸಾಲ ಮನ್ನಾ ಮತ್ತಿತರ ಯೋಜನೆಗಳನ್ನು ಹಾಕಿಕೊಂಡಿರುವ ರಾಜ್ಯಸರ್ಕಾರ, ಸಂಪನ್ಮೂಲ ಕ್ರೋಡೀಕರಿಸಲು ತೆರಿಗೆ ಹೆಚ್ಚಳಕ್ಕೆ ಮುಂದಾಗಿದೆ.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತ ಈ ಸೂಚನೆ ನೀಡಿರುವ ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಸಾವಿರಾರು ಕೋಟಿ ರೂಪಾಯಿ ಅಗತ್ಯ. ಹೀಗಾಗಿ ಕೆಲವು ತೆರಿಗೆಗಳನ್ನು ಹೆಚ್ಚಿಸಲು ಚಿಂತನೆ ನಡೆದಿದೆ ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸರ್ಕಾರದ ಅಧಿಕಾರವಧಿಯಲ್ಲಿ ಅನೇಕ ಮಹತ್ವದ ಕಾರ್ಯಕ್ರಮಗಳು ಜಾರಿಗೆ ಬರಲಿವೆ. ಪೂರ್ಣ ಅಧಿಕಾರವಧಿಯನ್ನು ಈ ಸರ್ಕಾರ ಪೂರೈಸಲಿದೆ. ರೈತರು ಮತ್ತು ಬಡವರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications