ಜನನಾಯಕರ ಜೊತೆ ಕುಮಾರಣ್ಣನ ವಿಡಿಯೋ ಕಾನ್ಫರೆನ್ಸ್
ಮೈಸೂರು : ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ, ಶನಿವಾರ(ಫೆ.3) ಹೈಟೆಕ್ ಮಾದರಿಯಲ್ಲಿ ಬೈಠಕ್ ನಡೆಸಲಿದ್ದಾರೆ.
ಅಬ್ದುಲ್ ನಜೀರ್ ಸಾಬ್ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ಅವರಣದಲ್ಲಿ ಅಯೋಜಿಸಲಾಗಿರುವ ಸಭೆಯಲ್ಲಿ, ಮುಖ್ಯಮಂತ್ರಿಗಳು ಎಲ್ಲಾ ಚುನಾಯಿತ ಪಂಚಾಯಿತಿ ಪ್ರತಿನಿಧಿಗಳೊಂದಿಗೆ ಚರ್ಚಿಸಲಿದ್ದಾರೆ. ಈ ಸಂದರ್ಭದಲ್ಲಿ 176 ತಾಲೂಕಿನ ಸುಮಾರು 96,000 ಪ್ರತಿನಿಧಿಗಳು, ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಭಿವೃದ್ಧಿ ಜತೆಗೆ, ನಾನಾ ಸಮಸ್ಯೆಗಳ ಬಗ್ಗೆ ಕುಮಾರಸ್ವಾಮಿ ಚರ್ಚಿಸಲಿದ್ದಾರೆ. 27 ಜಿಲ್ಲೆಯ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಫೆಬ್ರವರಿ 3ಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರ ವಹಿಸಿಕೊಂಡು ಒಂದು ವರ್ಷವಾಗುತ್ತದೆ. ಇದೇ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳ ಸ್ಮರಣ ಸಂಚಿಕೆಯನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications