ಐಐಎಸ್‌ಸಿ ಲ್ಯಾಬ್‌ಗೆ ಬೆಂಕಿ; ಮುಖ್ಯ ದಾಖಲೆಗಳು ಭಸ್ಮ
ಬೆಂಗಳೂರು : ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ಪ್ರಯೋಗಾಲಯದಲ್ಲಿ ಬೆಂಕಿ ಅನಾಹುತ ಸಂಭವಿಸಿರುವುದು ಶುಕ್ರವಾರ ವರದಿಯಾಗಿದೆ.
ಮೈಕ್ರೋ ಬಯೋಲಜಿ ಮತ್ತು ಸೆಲ್ ಬಯೋಲಜಿ ವಿಭಾಗದ ಜೆನೆಟಿಕ್ ಇಂಜಿನೀಯರಿಂಗ್ ಪ್ರಯೋಗಾಲಯದಲ್ಲಿ ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದ 50ಕ್ಕೂ ಹೆಚ್ಚು ಸಿಬ್ಬಂದಿಗಳು ಸತತವಾಗಿ ಒಂದೂವರೆ ಗಂಟೆಗಳ ಕಾಲ ಕಾರ್ಯ ನಿರ್ವಹಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅನಾಹುತ ಸಂಭವಿಸಿರಬಹುದು ಎಂಬ ಶಂಕೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ವ್ಯಕ್ತಪಡಿಸಿದ್ದಾರೆ.
ಸಂಶೋಧನೆಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು ನಾಶವಾಗಿದೆ ಹಾಗೂ ಮಹತ್ವದ ಮಾಹಿತಿಗಳನ್ನು ಒಳಗೊಂಡಿದ್ದ ಗಣಕಗಳು ಕೂಡ ಹಾಳಾಗಿದೆ ಎಂದು ಮೈಕ್ರೋ ಬಯೋಲಜಿ ವಿಭಾಗದ ಮುಖ್ಯಸ್ಥೆ ಡಾ. ವಿಜಯಾ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications