• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಫೆ.15ರ ನಂತರ ನಮ್ಮ ಸಂಸದರು ಬಾಯಿಬಿಡುತ್ತಾರಂತೆ!

By Staff
|

ಮೈಸೂರು : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸಂಸದರು ತಮ್ಮ ಮುಂದಿನ ನಡೆ ಏನೆಂಬುದನ್ನು ಫೆಬ್ರವರಿ 15ರನಂತರ ನಿರ್ಧರಿಸಲಿದ್ದಾರೆ.

ಮೈಸೂರು ಸಂಸದ ಸಿ.ಎಚ್‌.ವಿಜಯಶಂಕರ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಫೆಬ್ರವರಿ 15ರಂದು ಬೆಂಗಳೂರಿನಲ್ಲಿ ಜಿ.ಮಾದೇಗೌಡರ ನೇತೃತ್ವದಲ್ಲಿ ಕಾವೇರಿ ಕ್ರಿಯಾ ಸಮಿತಿ ಸಭೆ ನಡೆಯಲಿದೆ. ಸಂಸದರು ಇದರಲ್ಲಿ ಭಾಗವಹಿಸಲಿದ್ದು, ಆನಂತರ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ತೀರ್ಪನ್ನು ಗೆಜೆಟ್‌ನಲ್ಲಿ ಪ್ರಕಟಿಸದಂತೆ ತಡೆಯುವುದು ನಮ್ಮ ಆದ್ಯತೆ. ವಿವಾದಕ್ಕೆ ಸಂಬಂಧಿಸಿದಂತೆ ನಾವು ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರಿಗೂ ಮನವಿ ಸಲ್ಲಿಸಲಿದ್ದೇವೆ. ಫೆಬ್ರವರಿ 23ರಂದು ಕೇಂದ್ರ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಆ ಸಂದರ್ಭದಲ್ಲಿ ರಾಜ್ಯದ ಸಂಸದರು ಒಗ್ಗಟ್ಟಿನಿಂದ ಹೋರಾಡಲಿದ್ದೇವೆ ಎಂದು ಅವರು ವಿವರಿಸಿದರು.

ಕೇಂದ್ರ ಸಂಪುಟದಲ್ಲಿರುವ ರಾಜ್ಯದ ಸಂಸದರು, ಕಾವೇರಿ ನ್ಯಾಯಮಂಡಳಿ ತೀರ್ಪು ಜಾರಿ ವಿಚಾರದಲ್ಲಿ ಮರುಚಿಂತನೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಅವರು ಆಗ್ರಹಪಡಿಸಿದರು.

(ಏಜನ್ಸೀಸ್‌)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more