• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

26 ಕಾಂಗ್ರೆಸ್‌ ವಿಧಾನ ಪರಿಷತ್ತು ಸದಸ್ಯರ ಅಮಾನತು!!

By Staff
|

ಬೆಂಗಳೂರು : ಸದನದ ಕಾರ್ಯಕಲಾಪಗಳಿಗೆ ಅಡ್ಡಿಪಡಿಸಿದ ಕಾಂಗ್ರೆಸ್‌ನ 26ವಿಧಾನ ಪರಿಷತ್ತು ಸದಸ್ಯರನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ.

ಸದನ ಸೇರುತ್ತಿದ್ದಂತೆಯೇ ಜೆಡಿಯು ಸದಸ್ಯರಾದ ಡಾ.ಎಂ.ಪಿ.ನಾಡಗೌಡ ಮತ್ತು ಬಸವರಾಜ ಬೊಮ್ಮಾಯಿ ಸದನದ ಬಾವಿಗಿಳಿದು, ಕಳೆದ ಒಂದು ವಾರದಿಂದ ಸದನವನ್ನು ಮುಂದೂಡುತ್ತಿರುವುದಕ್ಕೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕಾವೇರಿ, ರಾಜ್ಯದ ಬರ ಪರಿಸ್ಥಿತಿ ಮತ್ತಿತರ ಸಂಗತಿಗಳನ್ನು ಸದನದಲ್ಲಿ ಚರ್ಚಿಸಬೇಕು ಎಂದು ಬೇಡಿಕೆ ಮುಂದಿಟ್ಟರು.

ಈ ಸಂದರ್ಭದಲ್ಲಿ ಪ್ರತಿಪಕ್ಷದಲ್ಲಿರುವ ಕಾಂಗ್ರೆಸ್‌ ಸದಸ್ಯರು ಎಚ್‌.ಕೆ.ಪಾಟೀಲ್‌ ನೇತೃತ್ವದಲ್ಲಿ , ಸಭಾಪತಿ ಚುನಾವಣೆಯ ವಿಚಾರವನ್ನು ಪ್ರಸ್ತಾಪಿಸಿದರು. ಚುನಾವಣೆ ನಡೆಸದೇ, ಎನ್‌.ತಿಪ್ಪಣ್ಣ ಸಭಾಪತಿ ಸ್ಥಾನದಲ್ಲಿ ಕೂತಿರುವುದನ್ನು ಖಂಡಿಸಿದರು. ಆಗ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಉಂಟಾಯಿತು. ಸದನ ಗೊಂದಲದ ಗೂಡಾಯಿತು.

ಸದನ ನಡೆಯಲು ಸಹಕರಿಸಿ ಎಂಬ ತಿಪ್ಪಣ್ಣ ಅವರ ಮನವಿಗೆ ಸ್ಪಂದಿಸದ ಕಾಂಗ್ರೆಸ್‌ನ 26ಸದಸ್ಯರನ್ನು ಅಶಿಸ್ತಿನ ಕಾರಣ ನೀಡಿ ಅಮಾನತುಗೊಳಿಸಲಾಯಿತು.

ಈ ಅಮಾನತಿನ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡುವುದಾಗಿ ಕಾಂಗ್ರೆಸ್‌ನ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

(ಯುಎನ್‌ಐ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more