ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಧವಾರದಿಂದ ಮನೆಮನೆಗೆ ಪೋಲಿಯೋ ಹನಿ...

By Staff
|
Google Oneindia Kannada News

ಬೆಂಗಳೂರು : ಮೊನ್ನೆ ನಿಮ್ಮ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಲಿಲ್ಲವೆ? ಚಿಂತೆ ಮಾಡಬೇಡಿ... ಇಂದಿನಿಂದ(ಫೆ.13) ಪೋಲಿಯೋ ಹನಿ ಹಾಕಲು, ಆರೋಗ್ಯ ಕಾರ್ಯಕರ್ತರು ನಿಮ್ಮ ಮನೆಗೆ ಭೇಟಿ ನೀಡಲಿದ್ದಾರೆ.

ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶೇಕಡಾ 75ರಷ್ಟು ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಮನೆಮನೆಗೆ ತೆರಳಿ ಲಸಿಕೆ ಹಾಕುವ ಕಾರ್ಯಕ್ರಮ ಇಂದಿನಿಂದ ಆರಂಭಗೊಳ್ಳುತ್ತಿದೆ. ಭಾನುವಾರ ನಡೆದ ಪಲ್ಸ್‌ ಪೋಲಿಯೋ ಆಂದೋಲನದಲ್ಲಿ ರಾಜ್ಯಾದ್ಯಂತ 57ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ.

ರಾಜ್ಯದಲ್ಲಿ ಸುಮಾರು ಶೇಕಡಾ 80ರಷ್ಟು ಪ್ರಮಾಣದಲ್ಲಿ ಲಸಿಕೆ ಹಾಕಲಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಶೇಕಡಾ 93.4ರಷ್ಟು ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹಿಂದೆಂದಿಗಂತಲೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ ಎಂದು ಶಿಶು ಆರೋಗ್ಯ ಮತ್ತು ಸಂತಾನೋತ್ಪತ್ತಿ ಇಲಾಖೆ ಮೂಲಗಳು ಹೇಳಿವೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X