ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯರಾತ್ರಿಯಿಂದಲೇ ಪೆಟ್ರೋಲ್‌-ಡೀಸೆಲ್‌ ದರ ಕಡಿತ

By Staff
|
Google Oneindia Kannada News

ನವದೆಹಲಿ : ಗುರುವಾರ ಮಧ್ಯರಾತ್ರಿಯಿಂದಲೇ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಕ್ರಮವಾಗಿ 2 ಮತ್ತು 3ರೂ. ಕಡಿಮೆಯಾಗಿದೆ ಎಂದು ಪೆಟ್ರೋಲಿಯಂ ಸಚಿವ ಮುರಳಿ ದೋರಾ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿ ನೇತೃತ್ವದಲ್ಲಿ ಹಣಕಾಸು ಮತ್ತು ಪೆಟ್ರೋಲಿಯಂ ಸಚಿವರು ಸಭೆ ನಡೆಸಿ, ಬೆಲೆ ಇಳಿಕೆಯ ತೀರ್ಮಾನವನ್ನು ಕೈಗೊಂಡಿದ್ದಾರೆ. ರಾಜಧಾನಿ ನಗರದಲ್ಲಿ ಒಂದು ಲೀಟರ್‌ ರೀಟೈಲ್‌ ಪೆಟ್ರೋಲ್‌ ದರ ರೂ.42,85 ಮತ್ತು ಡೀಸೆಲ್‌ ದರ ರೂ.30.35 ಇದೆ.

ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ದರ ಕುಸಿದ ಹಿನ್ನೆಲೆಯಲ್ಲಿ, ಭಾರತ ಸರ್ಕಾರ ದರ ಕಡಿತವನ್ನು ಮಾಡಿದೆ. ಸರ್ಕಾರದ ನಿರ್ಧಾರವನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X