ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡೀಸೆಲ್‌ ಬೆಲೆ ಇಳಿಕೆ : ಪ್ರಯಾಣದರ ಇಳಿಯಲಿದೆಯೇ?

By Staff
|
Google Oneindia Kannada News

ಬೆಂಗಳೂರು : ಬಸ್‌ ಪ್ರಯಾಣ ದರ ಇಳಿಕೆ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಎನ್‌.ಚೆಲುವರಾಯಸ್ವಾಮಿ ಹೇಳಿದ್ದಾರೆ.

ಅವರು ಶನಿವಾರ(ಫೆಬ್ರವರಿ 17) ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಡೀಸೆಲ್‌ ದರ ಇಳಿಕೆ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಪ್ರಯಾಣ ದರ ಪರಿಷ್ಕರಿಸುವ ಬಗ್ಗೆ ಮೂರು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ಮೊದಲು ನಾಲ್ಕೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಆನಂತರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಈ ಮೊದಲು ಎರಡು ಬಾರಿ ಡೀಸೆಲ್‌ ದರ ಏರಿಕೆಯಾಗಿದ್ದರೂ ದರ ಪರಿಷ್ಕರಣೆ ಮಾಡಿರಲಿಲ್ಲ. ಒಂಬತ್ತು ತಿಂಗಳ ನಂತರ ಪರಿಷ್ಕರಿಸಲಾಗಿತ್ತು. ಆನಂತರ ಎರಡು ಬಾರಿ ಡೀಸೆಲ್‌ ದರ ಇಳಿಕೆಯಾಗಿದೆ. ಆದರೆ ದರ ಪರಿಷ್ಕರಣೆ ಕುರಿತು ತಕ್ಷಣದ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X