ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಂಕಣಿ ಕಲಿಕೆಗೆ ಗ್ರೀನ್‌ ಸಿಗ್ನಲ್‌ : ಕರಾವಳಿಯಲ್ಲಿ ಹರ್ಷ

By Staff
|
Google Oneindia Kannada News

ಬೆಂಗಳೂರು : ಕೊಂಕಣಿ ಭಾಷೆಯನ್ನು ವಿದ್ಯಾರ್ಥಿಗಳು ಮೂರನೇ ಐಚ್ಛಿಕ ಭಾಷೆಯಾಗಿ ಕಲಿಯಲು, ರಾಜ್ಯ ಸರ್ಕಾರ ಸಮ್ಮತಿಸಿದೆ.

6 ಮತ್ತು 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಕೊಂಕಣಿಯನ್ನು ಮೂರನೇ ಭಾಷೆಯಾಗಿ ಇನ್ನುಮುಂದೆ ಆಯ್ಕೆಮಾಡಿಕೊಳ್ಳಬಹುದು. ಸರ್ಕಾರದ ಈ ಕ್ರಮದಿಂದ ಉಡುಪಿ, ಮಂಗಳೂರು ಮತ್ತು ಕಾರವಾರ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಬಸವಾರಜ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಈ ಕರಾವಳಿ ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಕೊಂಕಣಿಗೆ ತೃತೀಯ ಭಾಷೆ ಸ್ಥಾನಮಾನ ಕಲ್ಪಿಸಬೇಕೆಂದು ಸರ್ಕಾರವನ್ನು ಈ ಹಿಂದೆ ಒತ್ತಾಯಿಸಿದ್ದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X